ಬೇಸಿಗೆ, ಬಿಸಿಗಾಳಿ: ಆರೋಗ್ಯ ರಕ್ಷಣೆಗೆ ಸುಲಭದ ಸಲಹೆಗಳು

tulunadlife official
0
ಮಾರ್ಚ್‌ ತಿಂಗಳ ಮೊದಲ ವಾರದಲ್ಲಿಯೇ ಬಿಸಲಿನ ತಾಪ ಹೆಚ್ಚಾಗಿದೆ. ಬಿಸಿಗಾಳಿ ಮತ್ತು ಬೇಸಿಗೆಯ ಸುಡು ಬಿಸಿಲು ಜನರ ಆರೋಗ್ಯದ ಮೇಲೆ ಬೀರುವ ಪರಿಣಾಮ ಬೀರಲಿದೆ. ಆದ್ದರಿಂದ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಜನರು ಬಿಸಿಲಿನಿಂದ ಹೇಗೆ ರಕ್ಷಣೆ ಪಡೆಯಬೇಕು?. ಬಿಸಿಗಾಳಿಯಿಂದ ಹೇಗೆ ರಕ್ಷಿಸಿಕೊಳ್ಳಬೇಕು? ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.


ತೆಳುವಾದ ಬಟ್ಟೆ ಧರಿಸಿ: ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ.

ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು.

ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ. ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ಧ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಬೇಕು ಎಂದು ಜನರಿಗೆ ಸಲಹೆ ನೀಡಲಾಗಿದೆ.

ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀರ್ವ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲವೇ 104ಕ್ಕೆ ಕರೆ ಮಾಡಬೇಕು. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸಿದ ನೀರು ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಬೇಕು.

ಕೈಗಳನ್ನು ಸಾಬೂನು ಮತ್ತು ನೀರಿನಿಂದ 45 ಸೆಕೆಂಡ್‍ಗಳ ಕಾಲ ತೊಳೆದ ನಂತರ ಆಹಾರ ಸೇವಿಸಬೇಕು. ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಮಲ, ಮೂತ್ರ ವಿಸರ್ಜನೆಗಾಗಿ ಶೌಚಾಲಯ ಬಳಸಬೇಕು. ಸುರಕ್ಷಿತ ಆಹಾರ ಮಾತ್ರ ಸೇವಿಸಿ, ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರಕ್ಕೆ ಆದ್ಯತೆ ನೀಡಿರಿ.

ಏನು ಮಾಡಬಾರದು?; ಬಿಗಿಯಾದ, ಗಾಢ ಬಣ್ಣದ, ಸಿಂಥೆಟಿಕ್ ಬಟ್ಟೆ ಧರಿಸಬಾರದು. ಕುಷನ್‍ಯುಕ್ತ ಕುರ್ಚಿಯಲ್ಲಿ ಕೂರಬಾರದು. ಸೋಡಾ ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನಿಯಗಳನ್ನು ಕುಡಿಯಬೇಡಿ (ಬಾಯಾರಿಕೆಯಾದಾಗ ಕಡ್ಡಾಯವಾಗಿ ನೀರು ಕುಡಿಯಬೇಕು).

ಬೆವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬಾರದು. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು. ಮಾಂಸಹಾರ ಸೇವನೆ ಮತ್ತು ಮದ್ಯಪಾನ ಮಾಡಬಾರದು. ಬಿಗಿಯಾದ ಗಾಳಿಯಾಡದ ಪಾದರಕ್ಷೆ ಅಥವಾ ಶೂ ಧರಿಸಬೇಡಿ

Post a Comment

0Comments

Post a Comment (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!